News Karnataka Kannada
Thursday, April 25 2024
ಮಂಗಳೂರು

ಮಂಗಳೂರಲ್ಲಿ ಪ್ರತಿಕೂಲ ಹವಾಮಾನ ಕಣ್ಣೂರಲ್ಲಿ ಲ್ಯಾಂಡ್‌ ಆದ ವಿಮಾನ

Mangaluru airport: 76 per cent increase in passenger traffic
Photo Credit : News Kannada

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ವಿಮಾನ ಲ್ಯಾಂಡಿಂಗ್‌ ಗೆ ತಡೆ ಎದುರಾಗಿದೆ.

ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕಣ್ಣೂರಿಗೆ  ಡೈವರ್ಟ್ ಮಾಡಲಾಗಿದೆ.

ಬೆಂಗಳೂರಿನಿಂದ ಶನಿವಾರ ಬೆಳಗ್ಗೆ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಮಂಗಳೂರಿನಲ್ಲಿ 11ಗಂಟೆಗೆ ಲ್ಯಾಂಡ್‌ ಆಗಬೇಕಿತ್ತು. ಮೋಡ ಮುಸುಕಿದ ವಾತಾವರಣ ಕಾರಣದಿಂದ ಲ್ಯಾಂಡಿಂಗ್‌ ಸಾಧ್ಯವಾಗದೆ ಕಣ್ಣೂರಿನಲ್ಲಿ ವಿಮಾನ ಇಳಿದಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ ವಾತಾವರಣ ತಿಳಿಯಾಗಿದ್ದು, ಮತ್ತೆ ವಿಮಾನ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಲ್ಯಾಂಡಿಂಗ್‌ ಆಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು