ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಮಹಾ ಸಭೆ

ಮಂಗಳೂರು: ಪತ್ರ ಕರ್ತರ ಮೂಲಕ ಸ್ಥಾಪನೆಯಾದ ಗೃಹ ನಿರ್ಮಾಣ ಸಹಕಾರಿ ಸಂಘ ಮಾದರಿ ಸಂಸ್ಥೆಯಾಗಿ ಬೆಳೆಯು ವಂತಾಗಲಿ ಎಂದು ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ ದ ಮಹಾ ಸಭೆಯ ಬಳಿಕ ನಡೆದ ಅಭಿ ನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕೋವಿಡ್ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನ್ ಲೈನ್ ಮೂಲಕ ಸಹಕಾರಿ ಸಂಘಗಳ ನೋಂದಣಿ ಆರಂಭಗೊಂಡಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ ನೋಂದಣಿಯಾಗಿದೆ.

ಈ ಸಂದರ್ಭದಲ್ಲಿ ತಾನು ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ತೃಪ್ತಿ ತಂದಿದೆ. ಸಹಕಾರಿ ಸಂಘವನ್ನು ಉತ್ತಮವಾಗಿ ಬೆಳೆಸಲು ಪರಿಶ್ರಮ ಬೇಕು. ಪ್ರತಿ ವರ್ಷ ನಿಗದಿತ ಸಮಯದಲ್ಲಿ ಸಭೆ,ಲೆಕ್ಕ ಪತ್ರ ಮಂಡನೆ, ಮಹಾಸಭೆ, ನವೀಕರಣ ನಡೆಸುವ ಮೂಲಕ ‌ಸಂಘದ ಚಟುವ ಟಿಕೆಗಳನ್ನು ಜೀವಂತವಾಗಿರಿಸಬೇಕು ಎಂದು ಸಲಹೆ ನೀಡಿದರು.

ದ.ಕ ಜಿಲ್ಲಾ ಪತ್ರ ಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಕೇಶವ ಕುಂದರ್, ಪುಷ್ಪರಾಜ್ ಬಿ.ಎನ್, ಇಬ್ರಾಹಿಂ ಅಡ್ಕಸ್ಥಳ, ಮುಹಮ್ಮದ್ ಆರಿಫ್ ಪಡುಬಿದ್ರಿ, ಜಿತೇಂದ್ರ ಕುಂದೇಶ್ವರ,ಆತ್ಮ ಭೂಷಣ್, ಸತ್ಯವತಿ, ವಿಲ್ಫೆಡ್ ಡಿ ಸೋಜ, ವಿಜಯ ಕೋಟ್ಯಾನ್ ಪಡು, ಸುಖ್ ಪಾಲ್ ಪೊಳಲಿ, ಸುರೇಶ್ ಡಿ ಪಳ್ಳಿ, ಹರೀಶ್ ಮೋಟು ಕಾನ, ಶಿಲ್ಪಾ ಕುಮಾರಿ ಮೊದಲಾದ ವರು ಉಪಸ್ಥಿತರಿದ್ದರು. ಕಾರ್ಯ ನಿರ್ವಹಣಾ ಧಿಕಾರಿ ಅಭಿಷೇಕ್ ಸಂಘದ ಲೆಕ್ಕ ಪತ್ರ ಮಡಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ವಂದಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago