ಮಂಗಳೂರು: ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದ ಮೂಲತಃ ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ಎಂಬುವರು ನಾಪತ್ತೆಯಾಗಿದ್ದಾರೆ. ಈ ಕುರಿತು ಆಕೆಯ ತಂದೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸೋನಿಯಾ 8 ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದು, ಬೆಂದೂರಿನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.
ಈ ನಡುವೆ ಆಕೆಗೆ ಕರೆ ಮಾಡಿದರೂ ಸ್ವೀಕರಿಸದ ಕಾರಣ ಅಪಾರ್ಟ್ಮೆಂಟ್ನಲ್ಲಿ ಆಕೆಯ ಬಗ್ಗೆ ವಿಚಾರಿಸಲಾಗಿತ್ತು. ಆದರೆ ಅಲ್ಲಿ ಆಕೆಯ ಬಗ್ಗೆ ಮಾಹಿತಿ ಇಲ್ಲ ಎಂದು ಅಪಾರ್ಟ್ಮೆಂಟ್ ನವರು ತಿಳಿಸಿದ್ದಾರೆ ಎಂದು ತಂದೆ ದೂರು ನೀಡಿದ್ದಾರೆ.