ಅಂತ:ಕರಣ ಶುದ್ಧಿಯಿಂದ ದೇವರ ಅನುಗ್ರಹ ಪ್ರಾಪ್ತಿ: ದೇವು ಮೂಲ್ಯಣ್ಣ ಅಭಿಪ್ರಾಯ

ಬಂಟ್ವಾಳ: ಅಂತ:ಕರಣ ಶುದ್ಧಿಯಿಂದ  ದೈವ, ದೇವಸ್ಥಾನಗಳಲ್ಲಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ದೇವರ ಅನುಗ್ರಹ ಪ್ರಾಪ್ತಿಯಾಗುವುದು ಎಂದು ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ  ಹೇಳಿದರು.

ಸುಮಾರು 1ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ  ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ.ರಮಾನಾಥ ರೈ,  ದೇಗುಲದ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರ ಸಾಧನೆಯಿಂದ ಕ್ಷೇತ್ರದಲ್ಲಿ ಗಾಯತ್ರಿ ದೇವಿ ನೆಲೆಯಾಗಿದ್ದಾಳೆ ಎಂದರು.  ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮ ಸುಭಿಕ್ಷವಾಗುವುದು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಮಾತನಾಡಿ, ಊರ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು ಎಂದರು.ಬೆಂಗಳೂರು ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ಗಾಣಿಗ, ಧ.ಗ್ರಾ.ಯೋಜನೆ ಬಂಟ್ವಾಳ ತಾ.ಯೋಜನಾಧಿಕಾರಿ ಜಯಾನಂದ, ಮುಂಬಯಿ ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ, ಬಂಟ್ವಾಳ ತಾ. ವಿಶ್ವಕರ್ಮಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷೆ ರಜನಿ ಬಾಬು ಕುಲಾಲ್, ಸಫಲ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಸಂಜೀವ ಅಡ್ಯಾರ್, ಎಡಪದವು ಗಾಣಿಗರ ಸಂಘದ ಅಧ್ಯಕ್ಷ ಭಾಸ್ಕರ ಎಡಪದವು, ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಬಾಬು ಸಫಲ್ಯ, ಉಪಾಧ್ಯಕ್ಷ ಬೂಬ ಸಫಲ್ಯ, ಅರ್ಚಕ ಶ್ರೀಪತಿ ಉಡುಪ ಕೆಳಮಂಗಲ ವೇದಿಕೆಯಲ್ಲಿದ್ದರು. ಜೀರ್ಣೊದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಗಳು, ಸದಸ್ಯರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ನಾಗೇಶ್ ಕಲ್ಲಡ್ಕ, ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ಬೆಳಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠೆ, ಶ್ರೀ ರಾಘವೇಂದ್ರಗುರು ಬಿಂಬ ಪ್ರತಿಷ್ಠೆ, ಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು.

Gayathri SG

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

15 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

35 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

42 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

1 hour ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago