News Karnataka Kannada
Wednesday, May 01 2024
ಮಂಗಳೂರು

ಚಿನ್ನ ಪ್ರಿಯರಿಗೆ ಬಂಪರ್: ಸತತ ಮೂರನೇ ದಿನವೂ ಹಳದಿ ಲೋಹದ ಬೆಲೆ ಕುಸಿತ

Gold prices fall
Photo Credit : Freepik

ಮಂಗಳೂರು: ನಿನ್ನೆ ಸಾಕಷ್ಟು ಕುಸಿದಿದ್ದ ಚಿನ್ನದ ಬೆಲೆ ಇಂದು ಮತ್ತಷ್ಟು ಕುಸಿದಿದೆ. ನಿನ್ನೆಗೆ ಹೋಲಿಸಿದರೆ ಇಂದು ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 25 ಗಳಷ್ಟು ಕುಸಿತ ಕಂಡಿದ್ದು, ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 4,665 ಆಗಿದೆ.

ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,700 ಆಗಿದೆ. ಮಾರುಕಟ್ಟೆಯಲ್ಲಿ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,665 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,089 ಆಗಿದೆ. ಇದೇ ರೀತಿ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 37,320 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,712 ಆಗಿದೆ.

ಇನ್ನು ಇತ್ತ (10GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,650 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,890 ಆಗಿದೆ. ಅಲ್ಲದೇ (100GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,66,500 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,08,900 ಆಗಿದೆ.

ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,400, ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,050 ರೂ. ಆಗಿದೆ.

ನಿನ್ನೆಗೆ ಹೋಲಿಸಿದರೆ ಇಂದು ಸಹ ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಬೆಳ್ಳಿ ದರ ಇಂದು ಪ್ರತಿ ಕೆಜಿಗೆ ರೂ. 58,500 ಆಗಿದೆ. ಬೆಂಗಳೂರು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 630, ರೂ. 6,300 ಹಾಗೂ ರೂ. 63,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,000 ಆಗಿದ್ದರೆ ದೆಹಲಿಯಲ್ಲಿ ರೂ. 58,500 ಮುಂಬೈನಲ್ಲಿ ರೂ. 58,500 ಹಾಗೂ ಕೊಲ್ಕತ್ತದಲ್ಲೂ ರೂ. 58,500 ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು