ಬಂಟ್ವಾಳ: ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದೆ.
ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಪತ್ತೆಯಾದ ಗೋಲ್ಮಾಲ್ ಬಹಿರಂಗವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗೋದಾಮು ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ದೂರು ನೀಡಿದ್ದು,
ಗೋದಾಮಿನ ವ್ಯವಸ್ಥಾಪಕ ವಿಜಯ್ ವಿರುದ್ಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.