News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ನಾಪತ್ತೆ

Bantwal
Photo Credit : NewsKarnataka

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ನಾಪತ್ತೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ , ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಎಂಬುವವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ‌ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದವರು ಪೋನ್ ಸ್ವಿಚ್ ಆಪ್ ಆಗಿದೆ.ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಈತನ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸಿತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಇದೀಗ ಇವರ ಬೈಕ್ ಮತ್ತು ಮೊಬೈಲ್ ಪೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು