News Karnataka Kannada
Monday, April 29 2024
ಮಂಗಳೂರು

ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ: ಶಾಸಕ ಭರತ್ ಶೆಟ್ಟಿ

Govt Should Respond To Lorry Owners' Plight: MLA Bharath Shetty
Photo Credit : News Kannada

ಮಂಗಳೂರು: ‘ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ’ ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು.

ಅವರು ನ.2 ರ ಗುರುವಾರ ಕುಳಾಯಿಯಲ್ಲಿ ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ (ರಿ.) ಇದರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಜಿಂದಾಲ್ ಮಂಗಳೂರು ಕಲ್ಲಿದ್ದಲು ಘಟಕ ಮುಖ್ಯಸ್ಥ ಎಲ್. ರಾಮನಾಥನ್ ಮಾತನಾಡಿ ‘ಲಾರಿ ಮಾಲಕರ ಹಿತಕ್ಕಾಗಿ ಸಂಘಟನೆಯ ಶ್ರಮ ಪ್ರಸಂಶನೀಯ. ಮಂಗಳೂರು ಕೋಲ್ ಪ್ಲಾಂಟ್ ನಿಂದ ಮುಂದೆಯೂ ಲಾರಿ ಮಾಲಕರ ಅಗತ್ಯಗಳನ್ನು ಪೂರೈಸಲಾಗುವುದು’ ಎಂದರು.

ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಣಂಬೂರು ಉಪ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ್, ಸಾರಿಗೆ ಉದ್ಯಮಿ ನಿತ್ಯಾನಂದ ಶೆಟ್ಟಿ, ಉದ್ಯಮಿ ಹಾಗೂ ಸಂಘದ ಗೌರವಾಧ್ಯಕ್ಷ ಸುಜಿತ್ ಆಳ್ವ, ಸಂಘದ ಸಲಹೆಗಾರ ಬಿ.ಎಸ್. ಚಂದ್ರು ಮಾತನಾಡಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಸುನಿಲ್ ಡಿಸೋಜಾ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹಾರಿಸ್ ಹೊಸ್ಮಾರ್ ನಿರೂಪಿಸಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು