ಮಂಗಳೂರು

ಗಣೇಶೋತ್ಸವದಲ್ಲಿ ದೈವಗಳಿಗೆ ಅವಮಾನ, ವೈರಲ್‌ ವಿಡಿಯೋದಲ್ಲೇನಿದೆ ಗೊತ್ತಾ

ಉಳ್ಳಾಲ: ಉಳ್ಳಾಲ ತಾಲೂಕಿನ ಬೀರಿ ಕೋಟೆಕಾರು ಪ್ರದೇಶದಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದಿದೆ.ಈ ವೇಳೆ ವಿಭಿನ್ನ ಮತ್ತು ವಿಶೇಷ ರೀತಿಯ ವಿವಿಧ ಟ್ಯಾಬ್ಲೋಗಳು ಪ್ರದರ್ಶನಗೊಳ್ಳುತ್ತಿತ್ತು.ಇಷ್ಟು ಟ್ಯಾಬ್ಲೋಗಳ ಜೊತೆ ಗುಳಿಗ ದೈವದ ವೇಷವನ್ನು ಧರಿಸಿ ಓರ್ವ ರಸ್ತೆಯಲ್ಲಿ ನೃತ್ಯ ಮಾಡಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ

ಕಾಂತಾರ ಸಿನಿಮಾ ಬಂದ ನಂತರ ಈ ಹುಚ್ಚುತನ ಜಾಸ್ತಿಯಾಗಿದೆ.ದೈವಗಳಿಗೆ ಅಪಮಾನ ಮಾಡುವಂತ ಸ್ಥಿತಿಗೆ ಬಂದು ಬಿಟ್ಟಿದೆ ಹಾಗೂ ಬೇರೆ ಜೆಲ್ಲೆಯಲ್ಲಿ ಹಾಗೂ ಬೇರೆ ರಾಜ್ಯದಲ್ಲಿ ಈ ಪ್ರಕ್ರಿಯೆ ಶುರುವಾಗಿದೆ. ಅದರಲ್ಲೂ ನಮ್ಮ ದ.ಕ ಜಿಲ್ಲೆಯಲ್ಲೇ ಈ ರೀತಿಯಾಗಿ ಅವಮಾನ ಮಾಡಿದರೆ ಯಾವ ಸಂದೇಶ ಹೋಗುತ್ತದೆ ಅನ್ನುವುದನ್ನು ಯೋಚನೆ ಮಾಡಬೇಕಾಗಿದೆ ಎಂದು ತುಳು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು ಕಾರ್ಯಕ್ರಮ ಆಯೋಜಕರು ಇದನ್ನು ತಡೆಯಬಹುದಿತ್ತಲ್ಲವೇ ಯಾಕೆ ಅವಕಾಶ ಕೊಟ್ಟಿದ್ದು ಎಂದು ಕಾರ್ಯಕ್ರಮ ಸಂಘಟಿಕರ ವಿರುದ್ಧ ಆಕ್ರೋಶಗಳು ಕೇಳಿ ಬರುತ್ತಿದೆ.

Umesha HS

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 min ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

22 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

35 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

51 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago