Categories: ಮಂಗಳೂರು

ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ ಕ್ಷೇತ್ರ ಕ್ಕೆ ಹಲವಾರು ಅನುದಾನಗಳನ್ನು ನೀಡಿದೆ, ಇನ್ನಷ್ಟು ಯೋಜನೆಗಳನ್ನು ಬಿಜೆಪಿ ಸರ್ಕಾರವು ನಡೆಸಿ ಕೊಡಲಿದೆ ಕಾಪು ಕ್ಷೇತ್ರ ದ ಅಭಿವೃದ್ದಿಗೆ ಗುರ್ಮೆ ಸುರೇಶ್ ಶೆಟ್ಟಿ ಯವರ ಅಗತ್ಯ ವಿದೆ ನಿಮ್ಮ ಸಂಪೂರ್ಣ ಬೆಂಬಲ ಅವರಿಗೆ ನೀಡಬೇಕಾಗಿ ಕೇಳಿ ಕೊಂಡರು.

ನಂತರ ಮಾತನಾಡಿದ ಕಾಪು ವಿಧಾನ ಸಭಾ ಕ್ಷೇತ್ರ ದ ಶಾಸಕರು  ಲಾಲಾಜಿ ಮೆಂಡನ್ ರವರು ಶೈಕ್ಷಣಿಕ, ಸಾಮಾಜಿಕ ಧಾರ್ಮಿಕವಾಗಿ ಗುರುತಿಸಿಕೊಂಡಿರುವ ಸಮಾಜ ಸೇವಕ ಗುರ್ಮೆ ಸುರೇಶ್ ಶೆಟ್ಟಿ ಯವರ ಜೊತೆಗೆ ಇದ್ದು ಬಿಜೆಪಿ ಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೆನೆ,ಗುರ್ಮೆ ಸುರೇಶ್ ಶೆಟ್ಟಿ ಯವರಿಂದ ಕಾಪು ಕ್ಷೇತ್ರವು ಅಭಿವೃದ್ಧಿ ಕ್ಷೇತ್ರವಾಗಲಿದೆ ಎಂದು ತಿಳಿಸಿ ನಿಮ್ಮ ಬೆಂಬಲ ನಮಗೆ ಅಗತ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಉಡುಪಿ ವಿಧಾನ ಸಭಾ ಕ್ಷೇತ್ರ ದ ಬಿಜೆಪಿ ಶಾಸಕರು ರಘುಪತಿ ಭಟ್ ರವರು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯ ಬಗ್ಗೆ ತಿಳಿಸಿದರು,ಗೋ ಹತ್ಯೆ ನಿಷೇದ ಕಾಯ್ದೆ ಹಿಂಪಡೆಯುವ ಬಗ್ಗೆ ಹಾಗೂ ಟಿಪ್ಪು ಜಯಂತಿ ಮರು ಆಚರಣೆ ನಡೆಸುವ ಬಗ್ಗೆ ಹಾಗೂ, ಭಜರಂಗದಳ ನಿಷೇದ ಮಾಡುವದರ,ಈ ರೀತಿಯ ಹಗಲು ಕನಸುಗಳನ್ನು ಕಾಣುವುದು ಕಾಂಗ್ರೆಸ್ ಪಕ್ಷದವರು ಬಿಡಬೇಕು, ಧರ್ಮ ರಕ್ಷಣೆ ಗೋಸ್ಕರ ಇರುವ ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಮತ್ತೆ ಆಡಳಿತಕ್ಕೆ ಬರುತ್ತೆ ಎಂದು ಭರವಸೆ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಶಾಸಕ ಲಾಲಾಜಿ ಮೆಂಡನ್ ರವರ ಅಭಿವೃದ್ಧಿ ಕೆಲಸಗಳು ಆದರ್ಶವು ಕಾಪು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಾಗಿ ಶ್ರೀ ರಕ್ಷೆ ಯಾಗಲಿದೆ, ಬಿಜೆಪಿ ಪಕ್ಷದ ಸಿದ್ದಂತಾ, ರಾಷ್ಟ್ರೀಯವಾದ, ಹಾಗೂ ರಾಷ್ಟ್ರ ಪರ ಚಿಂತನೆಗಳು ಹಾಗೂ ಹಿರಿಯರೆಲ್ಲರು ನನ್ನ ಮೇಲೆ ಇಟ್ಟ ನಂಬಿಕೆ ಯನ್ನ ಉಳಿಸಿ ಕೊಂಡು ಹೋಗುತ್ತೇನೆ ಎಂಬ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ,ಉದ್ಯಾವರ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ರವಿ ಕೋಟ್ಯಾನ್, ಆರ್ ಎಸ್ ಎಸ್ ಪ್ರಚಾರಕರು ಪ್ರಸಾದ್ ಕುತ್ಯಾರ್, ಉದ್ಯಾವರ ಪಂಚಾಯತ್ ಅಧ್ಯಕ್ಷರು ರಾಧಾಕೃಷ್ಣ ಶ್ರೀಯನ್, ರಾಜ್ಯ ಬಿಜೆಪಿ ಉಪಾಧ್ಯಕ್ಷರು ನಯನ ಗಣೇಶ್, ಸಂಪಿಗೆ ನಗರ ಭೂತ್ ಅಧ್ಯಕ್ಷರು ಶ್ರೀಧರ್ ಪಂಚಾಯತ್ ಸದಸ್ಯರು ಯೋಗೀಶ್ ಕೋಟ್ಯಾನ್, ವೀಣಾ ಶ್ರೀಧರ್, ಬಿಜೆಪಿ ಮುಖಂಡರು ಸುರೇಂದ್ರ ಪಣಿಯೂರು, ವಿಜಯ್ ಕುಮಾರ್ ಉದ್ಯಾವರ, ಗಣೇಶ್ ಕುಮಾರ್ ಉದ್ಯಾವರ, ಸಂತೋಷ್ ಬೊಲ್ಜೆ, ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago