News Karnataka Kannada
Sunday, April 14 2024
Cricket
ಮಂಗಳೂರು

ವರ್ಗಾವಣೆ ದಂಧೆಯಲ್ಲಿ ಕೈ ಮಂತ್ರಿಗಳು: ಬಿಜೆಪಿ ವಕ್ತಾರ ಶೇಣವ ಹೇಳಿದ್ದೇನು

Hand ministers in transfer racket: Here's what BJP spokesperson Shenava said
Photo Credit : News Kannada

ಮಂಗಳೂರು: ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು ೬೦ ದಿವಸ ಕಳೆಯುವುದರೊಳಗೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಂತ್ರಿಗಳು ಸಂಪೂರ್ಣ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಕ್ರಿಮಿನಲ್ ಗಳು ರಾಜಾರೋಷವಾಗಿ ತಿರುಗಾಡುವಂತಾಗಿದೆ ಎಂದು ದ‌.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸದನದಲ್ಲಿ ಕಾಂಗ್ರೆಸ್ ನಾಯಕರು ಹಿರಿಯ ನಾಯಕರನ್ನು ಏಕವಚನದಲ್ಲಿ ಕರೆಯುವಂತಾಗಿದೆ. ಮಂಗಳೂರಿನಲ್ಲಿ ಹಿಂದೂ ಯುವಕನನ್ನು ಮುಸ್ಲಿಂ ವ್ಯಾಪಾರಿ ಬೆಂಕಿ ಹಚ್ಚಿ ಕೊಲ್ಲುತ್ತಾನೆ. ಬೆಂಗಳೂರಿನಲ್ಲಿ ಹಾಡ ಹಗಲೇ ಡಬಲ್ ಮರ್ಡರ್ ನಡೆದಿದೆ. ಮೈಸೂರಿನಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ.

ಚಿಕ್ಕೊಡಿ ಜೈನ ಮುನಿಗಳನ್ನು ಹತ್ಯೆಗೈಯಲಾಗಿದೆ. ಇದರಲ್ಲಿ ಸರ್ಕಾರ ಆರೋಪಗಳಿಗೆ ರಕ್ಷಣೆ ನೀಡುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣವನ್ನು ಸರಕಾರ ಸಾಮಾನ್ಯವಾಗಿ ಪರಿಗಣನೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಣೆ ಮಾಡುವ ಪ್ರಯತ್ನವನ್ನು ಸರಕಾರ ಮಾಡಿದೆ. ಇದೇ ಒಬ್ಬ ಮುಸ್ಲಿಂ ಹತ್ಯೆಯಾದ್ರೆ ಎಲ್ಲಾ ಬುದ್ದಿ ಜೀವಿಗಳು, ದೇಶದಲ್ಲಿ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ ಎಂದು ದೊಂಬರಾಟ ಮಾಡುತ್ತಿದ್ದರು. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲು ದ.ಕ ಜಿಲ್ಲಾ ಬಿಜೆಪಿ ಒತ್ತಾಸುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು