News Karnataka Kannada
Friday, May 03 2024
ಮಂಗಳೂರು

ಸಿಎಂ ವಿರುದ್ದದ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆಯ ಸಿಡಿ ಒದಗಿಸುವಂತೆ ಹೈ ಕೋರ್ಟ್ ಸೂಚನೆ

Poonja
Photo Credit : News Kannada

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹರೀಶ್ ಪೂಂಜ ಅವರ ಹೇಳಿಕೆಯ ಸಿಡಿ ಒದಗಿಸುವಂತೆ ಹೈ ಕೋರ್ಟ್ ಸೂಚನೆ ನೀಡಿದೆ. ಮೇ 22 ರಂದು ಅಭಿನಂದನಾ ಸಮಾರಂಭವೊಂದರಲ್ಲಿ, ಸಿದ್ದರಾಮಯ್ಯ 24 ಹಿಂದು ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ಹಾಗು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು ಎಂದು ಶಾಸಕ ಹರೀಶ್ ಪೂಂಜ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಉಲ್ಲೇಖಿಸಿರುವ ಹೇಳಿಕೆಯ ಸಿಡಿ ಒದಗಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ಪೀಠದಿಂದ ಕೋರ್ಟ್ ಆದೇಶ ನೀಡಿದೆ. ಆಕ್ಷೇಪಣೆ ಸಲ್ಲಿಸಲು ಫಿರ್ಯಾದುದಾರರ ಪರ ವಕೀಲ ಬಿ. ಲತೀಫ್ ಎರಡು ವಾರಗಳ ಸಮಯಾವಕಾಶ ಕೋರಿದ್ದಾರೆ. ಹೀಗಾಗಿ ಡಿಸೆಂಬರ್ 8ಕ್ಕೆ ವಿಚಾರಣೆಯನ್ನು ನ್ಯಾಯಪೀಠ ಮುಂಡೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು