News Karnataka Kannada
Friday, May 17 2024
ಮಂಗಳೂರು

ಗರ್ಭಿಣಿ ವಕೀಲೆಗೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸಿದ ಹೈಕೋರ್ಟ್‌

Photo Credit : News Kannada

ಮಂಗಳೂರು: ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಹೈಕೋರ್ಟ್ ವಿಶೇಷ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಈ ರೀತಿಯ ಅವಕಾಶ ನೀಡಿರುವುದು ಇದೇ ಮೊದಲ ಬಾರಿಯಾಗಿದ್ದು, ನ್ಯಾಯಾಲಯದ ಈ ನಿರ್ಧಾರಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನವೆಂಬರ್‌ 18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆ ಬರೆಯಲು ವಕೀಲೆ ನೇತ್ರಾವರಿಗೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅನುಮತಿಸಿದ್ದಾರೆ. ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನೇತ್ರಾವತಿ ಅವರು ಎಂಟೂವರೆ ತಿಂಗಳು ಗರ್ಭಿಣಿಯಾಗಿರುವುದರಿಂದ ಅವರ ಆರೋಗ್ಯ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರವಾಸ ಮಾಡಲಾಗದು. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಪರೀಕ್ಷೆ ಬರೆಯಲು ಅನುಮತಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು