News Karnataka Kannada
Tuesday, April 30 2024
ಮಂಗಳೂರು

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ ದಂಪತಿ

HD Kumaraswamy arrives at Kukke Subramanya temple and offers special pujas. Deve Gowda couple
Photo Credit : News Kannada

ಮಂಗಳೂರು: ಮಾಜಿ ಪ್ರಧಾನಿ ದೇವೇಗೌಡ ದಂಪತಿ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಮಾನ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ಅವರು ಇಂದು ಮುಂಜಾನೆ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ.

ಇನ್ನು ಕಳೆದ ದಿನ ಆಗಮಿಸಬೇಕಿದ್ದ ದೇವೇಗೌಡ ದಂಪತಿ, ಮೋಡ ಕವಿದ ವಾತಾವರಣ ಇದ್ದ ಕಾರಣ ಹೆಲಿಕ್ಯಾಪ್ಟರ್ ಟೆಕ್ ಆಫ್ ಆಗಲಿಲ್ಲ. ಹೀಗಾಗಿ ತಡರಾತ್ರಿ ಆಗಮಿಸಿ, ಇಂದು ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿದ್ದಾರೆ.  ಬೆಳಿಗ್ಗೆ 6:30ಗೆ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ, ಅಕ್ಕಿ, ಬೆಲ್ಲ, ಕಡ್ಲೆಬೇಳೆ ಧಾನ್ಯಗಳಲ್ಲಿ ತುಲಾಭಾರ, ಮಹಾಪೂಜೆ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಉಪಸ್ಥಿತರಿದ್ದರು.  ಬಳಿಕ ರಸ್ತೆ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು