News Karnataka Kannada
Monday, April 22 2024
Cricket
ಮಂಗಳೂರು

ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಗಳನ್ನ ಹಾಡಿ ಹೊಗಳಿ “ಜೈ ಶ್ರೀರಾಮ್‌” ಎಂದ ಹೆಚ್‌ ಡಿ ಕುಮಾರಸ್ವಾಮಿ

ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ‌ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.
Photo Credit : News Kannada

ಮಂಗಳೂರು:  ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಭಾಗವಹಿಸಿ ಕಾರ್ಯಕ್ರಮವನ್ನು ಕೊಂಡಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣ, ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಇದು ಸ್ಮರಿಸಿಕೊಳ್ಳುವ ಸಂಧರ್ಭ.

ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ‌ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಿಲಾಗುತ್ತಿದೆ. ಮಾನವೀಯತೆ ವಿಕಸನ ವನ್ನು ಇಲ್ಲಿ ನೀಡಲಾಗುತ್ತದೆ. ಈ‌ ಕಾರ್ಯಕ್ರಮಕ್ಕೆ ಬಾರದೇ ಇದ್ರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು.

ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ. ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದಾಗ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಳಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ. ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ದೀರಿ. ಈಗ ಕಾರ್ಯಕ್ರಮ ಭಾಗವಹಿಸಿದ್ದೀರಲ್ಲ ಎಂತ ಯೋಚಿಸಿರಬಹುದು. ನನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕುಮಾರ ಸ್ವಾಮಿ ಅವರು ಭಾಷಣದ ಕೊನೆಗೆ ಜೈ ಶೀರಾಮ್ ಘೋಷಣೆ ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು