News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಭಾರೀ ಮಳೆ ಗುಡ್ಡ ಕುಸಿದು ಮನೆ ನೆಲಸಮ

Heavy rain landslides, house demolished
Photo Credit :

ಮಂಗಳೂರು: ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿತ್ತು. ನಂತರ ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿ ಗೃಹ ಪ್ರವೇಶಕ್ಕೆ ಸಜ್ಜು ಮಾಡಲಾಗಿತ್ತು. ಜುಲೈ 18ರಂದು ಗೃಹಪ್ರವೇಶಕ್ಕೆ ದಿನಾಂಕ ನಿಗದಿಪಡಿಸಲಾಗಿತ್ತು. ಎಲ್ಲಾ ತಯಾರಿಯನ್ನು ಮಾಡಲಾಗಿತ್ತು. ಆದರೆ ಭಾರೀ ಮಳೆಯಿಂದ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ.

ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು