News Karnataka Kannada
Friday, May 03 2024
ಮಂಗಳೂರು

ಮಂಗಳೂರು: ರಾಜ್ಯದಲ್ಲಿ ‌ಮುಂದಿನ‌ ಎರಡು‌ ದಿನ‌ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ

More than 12 districts receive rainfall for two days
Photo Credit : Wikimedia

ಮಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಯ ಕಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು