ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆ ಹಿನ್ನಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ (ಆ.3) ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಂಗಳವಾರ (ಆ.2) ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಡೆ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.