ಮಂಗಳೂರು: ಮಂಗಳೂರಿನಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಿನಲ್ಲಿ ಭಾರೀ ಅಕ್ರಮ ನಡೆದಿದೆ. ನಗರದ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಭಾರೀ ಸರ್ಕಾರದ ಅನುಮತಿ ಇಲ್ಲದೇ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಸಮಗ್ರ ತನಿಖೆಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಮೆಡಿಕಲ್ ಸೀಟ್ ಅಕ್ರಮದ ತನಿಖೆಗೆ ಆಯೋಗ ಪತ್ರ ಬರೆದಿದೆ.
ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು. ಈಗ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. 2022-23 ಸಾಲಿಗೆ 150 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ದಾಖಲಾತಿ ಆಗಿತ್ತು. 2021-22ರಲ್ಲಿ ಎಂಎಆರ್ಬಿ ಮೆಡಿಕಲ್ ಕಾಲೇಜು ನಡೆಸಲು ಅನುಮತಿ ನೀಡಿತ್ತು. ಆದರೆ 2022ರ ಸೆಪ್ಟೆಂಬರ್ ನಲ್ಲಿ ಎಂಎಆರ್ಬಿ ತಂಡ ಕಾಲೇಜಿನಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ಕಾಲೇಜಿನಲ್ಲಿ ರಿಸರ್ಚ್ ಸೆಂಟರ್ ಅಗತ್ಯ ಮಾನದಂಡ ಮತ್ತು ನುರಿತ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಎರಡನೇ ಬ್ಯಾಚ್ ನಲ್ಲಿ ಎಂಬಿಬಿಎಸ್ ದಾಖಲಾತಿಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಕಾನೂನು ಬಾಹಿರವಾಗಿ 150 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಕೋಟ್ಯಾಂತರ ರೂ. ಶುಲ್ಕ ಪಡೆದು ಸೀಟು ಹಂಚಿದ್ದಾರೆ.
ಹೀಗಾಗಿ ಇಲಾಖೆ ನಿರ್ಲಕ್ಷ್ಯದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿದೆ. ಅನುಮತಿ ರದ್ದತಿ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಜಿ.ಆರ್.ಮೆಡಿಕಲ್ ಕಾಲೇಜು ಆಡಳಿತ ಮೇಲ್ಮನವಿ ಸಲ್ಲಿಸಿದೆ.