News Karnataka Kannada
Saturday, April 13 2024
Cricket
ಮಂಗಳೂರು

ಬಂಟ್ವಾಳ: ದಂಪತಿ ಆತ್ಮಹತ್ಯೆ ಯತ್ನ: ಪತಿ ಸಾವು, ಪತ್ನಿ ಗಂಭೀರ

husband-wife-suicide attempt
Photo Credit : News Kannada

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪತಿ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ .

ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವರು. ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮನೆಯಲ್ಲಿ ಇಬ್ಬರು ಆತ್ಮಹತ್ಯೆ ಯತ್ನಿಸಿದ್ದು ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಇವರಿಗೆ ಐದು ವರ್ಷದ ಅವಳಿ ಜವಳಿ ಇಬ್ಬರು ಮಕ್ಕಳಿದ್ದಾರೆ‌. ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು