Categories: ಮಂಗಳೂರು

ಬಂಟ್ವಾಳ: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ, ಶಾಸಕ ರಾಜೇಶ್‌ ನಾಯ್ಕ್ ಹೇಳಿಕೆ

ಬಂಟ್ವಾಳ: ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವನ್ನು ಶಾಂತಿಯುತ ಬಂಟ್ವಾಳವಾಗಿ ಪರಿವರ್ತಿಸಿರುವ ತೃಪ್ತಿ ‌ನನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಅವರು ಕರೋಪಾಡಿ ಗ್ರಾ.ಪಂ‌.ನ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೇರವೇರಿಸಿ ,ಸುಮಾರು 80 ಲಕ್ಷದ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕರೋಪಾಡಿ ಗ್ರಾಮದಲ್ಲಿ 13 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಅನುದಾನಗಳ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ನಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳ ಪ್ರತಿಯೊಂದು ಸಹಿತ ದಾಖಲೆ ನಮ್ಮಲ್ಲಿದೆ, ಪೈಸೆಪೈಸೆಗೂ ಲೆಕ್ಕವಿದೆ. ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತದಾರರಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ ಕೆಲವರಿಂದ ನಡೆಯುತ್ತಿದ್ದು, ಈ ಕುರಿತು ಎಚ್ಚರ ವಹಿಸುವಂತೆ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಿಂದ ಇಡೀ ಜಗತ್ತು ದೇಶದತ್ತ ನೋಡುತ್ತಿದೆ . ಇತ್ತೀಚಿಗೆ ನಡೆದ ಸರ್ವೇಯಲ್ಲೂ ಪ್ರಧಾನಿ ಮೋದಿಯವರು ನಂ.1 ಸ್ಥಾನದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಜನಪರವಾದ ಯೋಜನೆಗಳನ್ನು ‌ಜಾರಿಗೆ ತರಲಾಗಿದೆ. ಕಾರ್ಯಕರ್ತರು ಇದನ್ನು ಮನೆಮನೆಗೆ ತೆರಲಿ ಮನವರಿಕೆ ಮಾಡುವ ಮೂಲಕ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತೆ ಅವರು ಕರೆ ನೀಡಿದರು.

ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಕರೋಪಾಡಿ ಶಕ್ತಿಕೇಂದ್ರದ ಪ್ರಮುಖ್ ಅನೆಯಾಲಕೋಡಿ ವಿಘ್ನೇಶ್ವರ ಭಟ್, ಕ್ಷೇತ್ರದ ಎಸ್.ಟಿ.ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಉಕ್ಕಿನಾರು, ಪಂಚಾಯಿತಿ ಸದಸ್ಯರಾದ ಪಟ್ಲಗುತ್ತು ರಘುನಾಥ ಶೆಟ್ಟಿ, ಅನೆಯಾಲಮಂಟಮೆ ಅಶ್ವತ್ಥ್ ಶೆಟ್ಟಿ, ಶಶಾಂಕ್ ಪದ್ಯಾಣ, ಪ್ರಸನ್ನ ಪದ್ಯಾಣ, ಜಯರಾಮ ನಾಯಕ್ ಮಿತ್ತನಡ್ಕ, ತಾಪಂ ಮಾಜಿ ಸದಸ್ಯ‌ ರಘುರಾಮ ಶೆಟ್ಟಿ, ಯುವಮೋರ್ಚಾ ಪ್ರಮುಖರಾದ ವಿನೋದ್ ಶೆಟ್ಟಿ, ಕರೋಪಾಡಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶ್ರೀಲತಾ ಶೆಟ್ಟಿ ಪಟ್ಲ ಉಪಸ್ಥಿತರಿದ್ದರು.

Sneha Gowda

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

6 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

21 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

43 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago