News Karnataka Kannada
Thursday, May 09 2024
ಮಂಗಳೂರು

ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ: ಸಚಿವ ದಿನೇಶ್ ಗುಂಡೂರಾವ್

Minister Dinesh Gundu Rao
Photo Credit : News Kannada

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿದ್ದಾರೆ. ಸಿಎಂ ಜೊತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೂಡಾ ಆಗಮಿಸಿದ್ದಾರೆ. ಇನ್ನು ದ,ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗ್ಗೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿಕೆ ನೀಡಿದ್ದಾರೆ.

“ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ. ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು,ಭಯ ಸೃಷ್ಠಿಸೋದನ್ನು ದಬ್ಬಾಳಿ ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಆಗುತ್ತಿದೆ. ಆಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ನನಗೆ ಹೇಳಿದರು. ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳನ್ನು ಕಳುಹಿಸಿದ್ದೇನೆ.

ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ.
ಈ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ. ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ. ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ್ವಾ. ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು