Categories: ಮಂಗಳೂರು

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ

ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ.

ಇನ್ನು ಪ್ರದೀಪ್ ರೈ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಪ್ರದೀಪ್ ರೈ ಅವರು ವಿಧಾನಸಭಾ ಚುನಾವಣೆ ವೇಳೆ ಕೊಡಗು ಜಿಲ್ಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಬೂತ್ ಮಟ್ಟದಲ್ಲಿ ಪಕ್ಷವನ್ನ ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಕೊಡಗಿನಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನ ಗೆಲ್ಲಿಸುವಲ್ಲಿಯೂ ಯಶಸ್ವಿಯಾಗಿದ್ದರು.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago