News Karnataka Kannada
Saturday, April 27 2024
ಮಂಗಳೂರು

ಎಪ್ರಿಲ್ 5ರಂದು ಮುಲ್ಕಿಯಲ್ಲಿ  ಬಂಟರ ಸಂಘಗಳ ಒಕ್ಕೂಟದ ಆಡಳಿತ ಕಚೇರಿ ಉದ್ಘಾಟನೆ

Inauguration of administrative office of Federation of Bunts Associations at Mulki on April 5
Photo Credit : By Author

ಮಂಗಳೂರು: ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಎಪ್ರಿಲ್ ೫ ರಂದು ಸಂಜೆ ೫ ಗಂಟೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ “ಶ್ರೀ ಪ್ರವೀಣ್ ಭೋಜ ಶೆಟ್ಟಿ’ ಆಡಳಿತ ಕಚೇರಿಯ ಉದ್ಘಾಟನೆ ನಡೆಯಲಿದೆ.

ಸಮಾರಂಭದಲ್ಲಿ ಒಡಿಯೂರು ಶ್ರೀ ಕ್ಷೇತ್ರದ ಗುರು ದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ.

ಸಮಾರಂಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ  ಸದಾಶಿವ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಒಕ್ಕೂಟದ ಮಹಾ ನಿರ್ದೇಶಕ  ಪ್ರವೀಣ್ ಭೋಜ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಉಪಸ್ಥಿತರಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು