Categories: ಮಂಗಳೂರು

ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಹಾಲಿ ಶಾಸಕರಿಗೆ ಸಂಪೂರ್ಣ ಸಹಕಾರ- ಇನಾಯತ್ ಅಲಿ

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿನ ಪ್ರಯುಕ್ತ ಕುಪ್ಪೆಪದವು ಹಾಗೂ ಮುತ್ತೂರು ವಲಯ ಕಾಂಗ್ರೆಸ್ ವತಿಯಿಂದನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿದರು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಹಾಗೂ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿ ಜನರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡದೆ, ಹಾಲಿ ಶಾಸಕರು ಅಭಿವೃದ್ಧಿ ವಿಷಯದಲ್ಲಿ ಒಂದು ಹೆಜ್ಜೆ ಮುಂದಿಟ್ಟರೆ ಅವರ ಜೊತೆ ನಾನು ನಾಲ್ಕು ಹೆಜ್ಜೆ ಮುಂದಿಟ್ಟು ಸಹಕಾರ ನೀಡಲು ತಯಾರಿದ್ದೇನೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಸುಹೈಲ್ ಕಂದಕ್, ಅಬೂಬಕ್ಕರ್ ಕಲ್ಲಾಡಿ, ಹರಿಯಪ್ಪ ಮುತ್ತೂರು, ಚಂದ್ರಹಾಸ, ದಯಾನಂದ ಬೋಳಿಯ, ಪುನೀತ್ ಕಟ್ಟೆಮಾರ್, ಉಂಜಾಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Gayathri SG

Recent Posts

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

17 seconds ago

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ…

5 mins ago

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

22 mins ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

40 mins ago

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕೆ

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್  ಹೈಕಮಾಂಡ್ ಕಣಕ್ಕಿಳಿಸಿದೆ.

46 mins ago

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ…

1 hour ago