ಮಂಗಳೂರು

ಕಣಚೂರು ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಮಂಗಳೂರು: ಕಣಚೂರು ವಿದ್ಯಾಸಂಸ್ಥೆಗಳವತಿಯಿಂದ ಕಣಚೂರು ಆಸ್ಪತ್ರೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಹಾಜಿ ಯು.ಕೆ. ಮೋನುರವರು ಧ್ವಜಾರೋಹಣ ನೆರವೇರಿಸಿದರು.

ಕಣಚೂರು ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಅಲೈಡ್ ಹಾಗೂ ಫಿಸಿಯೋಥೆರಪಿ ಕಾಲೇಜು, ನರ್ಸಿಂಗ್‌ ಕಾಲೇಜು ಮತ್ತು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭೋದಕ ಮತ್ತು ಭೋದಕೇತರ ಸಿಬ್ಬಂದಿವರ್ಗದವರು ಹಾಜರಿದ್ದರು.

ಕಣಚೂರು ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಅಬ್ದುಲ್ ರಹಿಮಾನ್, ಕಣಚೂರು ವಿದ್ಯಾಸಂಸ್ಥೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಡಾ. ಮಮತಾ ಕಾರ್ಯಕ್ರಮ ನಿರೂಪಿಸಿದರು. ಡೀನ್ ಡಾ.ಯು.ಪಿ.ರತ್ನಾಕರ ಸ್ವಾಗತಿಸಿದರು.

ಮೊದಲನೇ ಎಂ.ಬಿ.ಬಿ.ಯಸ್. ವಿದ್ಯಾರ್ಥಿನಿ ರಿಯಾ ಸ್ವಾತಂತ್ರೋತ್ಸವದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಣಚೂರ್ ಪದವಿಪೂರ್ವ ಹಾಗೂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಿದ್ಯಾಥಿನಿಯರು ದೇಶಭಕ್ತಿಯ ಗೀತೆಗಳನ್ನು ಹಾಡಿದರು. ಮಕ್ಕಳ ವೈದ್ಯರಾದ ಡಾ.ವರ್ಷ ವಂದಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago