News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ನೆಹರೂ ಮೈದಾನದಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆ

Mangaluru Macho Cooperative Society celebrates 75th Independence Day
Photo Credit : Wikimedia

ಮಂಗಳೂರು,ಆ.12(ಕ.ವಾ): ನಗರದ ನೆಹರೂ ಮೈದಾನದಲ್ಲಿ ಇದೇ ಆ.15ರ ಸೋಮವಾರ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.

ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಡಾ.ಡಿ. ವಿರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಜಗದೀಶ್ ಪೈ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕ್ರಿಶ್ಚನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೋಯ್ಲಸ್ ಡಿ’ಸೋಜ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಭಾಗವಹಿಸುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು