ತುಳು ಅಕಾಡೆಮಿ ಭವನದ ಕಾಮಗಾರಿಗೆ ವೇಗ ನೀಡಲು ಸೂಚನೆ

ಮಂಗಳೂರು, ಫೆ.21: ನಗರದ ತುಳು ಸಾಹಿತ್ಯ ಅಕಾಡೆಮಿ ಭವನದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿದರ್ಶನ ನೀಡಿದರು.

ಅವರು ಫೆ. 21ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಮಂಗಳೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ತುಳು ಸಾಹಿತ್ಯ ಅಕಾಡೆಮಿ ಭವನಕ್ಕೆ 3.60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ, ಕಾಮಗಾರಿಯನ್ನು ನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆಯವರು 2023ರ ಮಾರ್ಚ್ ನೊಳಗೆ ಪೂರ್ಣಗೊಳಿಸಬೇಕು, ನಿಗದಿ ಪಡಿಸಿದ ಕಾಲಮಿತಿಯಲ್ಲಿ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅದನ್ನು ಉದ್ಘಾಟನೆಗೆ ಸಜ್ಜುಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರಯ್ಯ ಅವರಿಗೆ ಸೂಚನೆ ನೀಡಿದರು.

ತುಳು ಭವನದಲ್ಲಿ ಅಂತಿಮ ಹಂತದಲ್ಲಿ ಆಗಬೇಕಿರುವ ಕಾಮಗಾರಿಗಳು, ಲಿಫ್ಟ್ ಅಳವಡಿಕೆ ಸೇರಿದಂತೆ ಅಗತ್ಯವಿರುವ ಕಾಮಗಾರಿಗಳ ಬಗ್ಗೆ ಅವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರವಿಕುಮಾರ್ ಎಂ‌.ಆರ್. ಅವರು ತುಳು ಭವನದಲ್ಲಿ ಈಗಾಗಲೇ ಶೇ.75ರಿಂದ 80ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಅದರಂತೆ ನಗರದಲ್ಲಿ ನಿರ್ಮಾಣಗೊತ್ತಿರುವ ಕೊಂಕಣಿ ಸಾಹಿತ್ಯ ಅಕಾಡೆಮಿ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಮೂರು ಕೋಟಿ ರೂಗಳ ಅನುದಾನ ನೀಡಲಾಗಿದೆ, ಆ ಕಟ್ಟಡದ ಮೂಲಭೂತ ಸೌಕರ್ಯಗಳಿಗೆ ಅಗತ್ಯವಿರುವ ಹಣವನ್ನು ಸಿಎಸ್ಆರ್ ಫಂಡ್ ನಡಿಯೂ ಪಡೆಯಲು ಅವಕಾಶವಿದೆ, ಬ್ಯಾರಿ ಅಕಾಡೆಮಿ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಹುಡುಕುವಂತೆ ಅಧ್ಯಕ್ಷರು ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರವಿಕುಮಾರ್ ಅವರು ಬ್ಯಾರಿ ಅಕಾಡೆಮಿಗೆ ಸೂಕ್ತವಾದ ನಿವೇಶನ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 5ಕೋಟಿ ರೂ.ಗಳು ಬಿಡುಗಡೆಯಾಗಿದೆ, ಸರ್ಕಾರದಿಂದ ಪರಿಷ್ಕೃತ ಆಡಳಿತಾತ್ಮಕ ಮಂಜೂರಾತಿಯನ್ನು ಕೂಡಲೇ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ರವಿಕುಮಾರ್ ಅವರಿಗೆ ತಿಳಿಸಿದ ಅವರು,
ಕಾಸರಗೋಡಿನಲ್ಲಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ 9 ಸದಸ್ಯರನ್ನೊಳಗೊಂಡ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ, ಅವರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ವೇದಿಕೆಯಲ್ಲಿದ್ದರು. ಕಾಸರಗೋಡಿನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಹೆಸರಿನ ಕನ್ನಡ ಸಂಸ್ಕೃತಿ ಭವನ ನಿರ್ಮಾಣದ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಅಕಾಡೆಮಿಗಳ ರಿಜಿಸ್ಟ್ರಾರ್ ಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Gayathri SG

Recent Posts

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

5 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

17 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

54 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

57 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

1 hour ago