News Karnataka Kannada
Sunday, April 21 2024
Cricket
ಮಂಗಳೂರು

ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರಿಗೆ ಅವಹೇಳನ: ಶಾಲೆಗೆ ಮುತ್ತಿಗೆ

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರಿಗೆ ಅವಹೇಳನ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
Photo Credit : News Kannada

ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರಿಗೆ ಅವಹೇಳನ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಶಿಕ್ಷಕಿ ಪ್ರಭಾ ಎಂಬುವವರು ಅಯೋಧ್ಯೆ, ರಾಮ ದೇವರು ಹಾಗೂ ಪ್ರಧಾನಿ ಮೋದಿ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಪೋಷಕಿಯೊಬ್ಬರ ಆಡಿಯೋ ವೈರಲ್ ಆಗಿದ್ದು, ಮಧ್ಯಾಹ್ನ 2 ಘಂಟೆಗೆ ಶಾಲೆಗೆ ಮುತ್ತಿಗೆ ಹಾಕಿ ಎಂಬ ಸಂದೇಶ ರವಾನಿಸಿದ್ದಾರೆ. ಮಧ್ಯಾಹ್ನ ಬಳಿಕ ಶಾಲೆ ಬಂದ್ ಆಗಿದ್ದರೂ ಕೆಲ ಕಾರ್ಯಕರ್ತರು ಹಾಗೂ ಪೋಷಕರು ಶಾಲಾ ಆವರಣದಲ್ಲಿ ಸೇರಿದ್ದು, ಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿದ್ದಾರೆ.

ಈ ವೇಳೆ ಶಾಲೆಗೆ ಐವನ್ ಡಿಸೋಜ ಭೇಟಿ ನೀಡಿದ್ದು, ಅವರ ಕಾರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.

ಆಡಿಯೋ ಹಾಗೂ ಸಂದೇಶ ವೈರಲ್ ಆದ ಹಿನ್ನೆಲೆ ಶಾಲೆಗೆ ಪೊಲೀಸ್ ಭದ್ರತೆ ನೀಡಲಾಗಿದೆ.

ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ, ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು