News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಮಿಲಾಗ್ರಿಸ್ ಕಾಲೇಜ್‌ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

1
Photo Credit : NewsKarnataka

ಮಂಗಳೂರು: ಮಂಗಳೂರು ಮಿಲಾಗ್ರಿಸ್ ಕಾಲೇಜು,ಆಂತರಿಕ ಗುಣಮಟ್ಟ ಖಾತರಿ ಕೋಶ, ಹಾಗೂ ಲಿಂಗ ಸಮಾನತೆ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಬ್ಯಾಂಕ್ ಮ್ಯಾನೇಜರ್ ಮತ್ತು ವಾಣಿಜ್ಯೋದ್ಯಮಿ ಕು. ಮಾರ್ಜೋರಿ ಟೆಕ್ಸೀರಾ ಆಗಮಿಸಿ ಅವರು ತಮ್ಮ ಭಾಷಣದಲ್ಲಿ ‘ಒಬ್ಬ ಮಹಿಳೆ ತನ್ನ ಕುಟುಂಬದಲ್ಲಿ ತಾಯಿ, ಮಗಳು, ಸೊಸೆ ಎಂಬ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಾಳೆ. ಹಾಗೆಯೇ ಸಾಮಾಜಿಕ ವ್ಯವಹಾರಗಳ ಮೂಲಕ ಅರ್ಥಿಕ ಭದ್ರತೆಯನ್ನು ನೀಡಿ ಸಮಾಜದ ಅಭಿವೃದ್ಧಿಯ ಶಿಲ್ಪಿಯಾಗಿ ಮುಂದುವರಿ ಯುತ್ತಿದ್ದಾರೆ ಮಹಿಳೆಯು ಒಂದು ಸಮುದಾಯದ ಹಾಗೂ ದೇಶದ ಅಭಿವೃದ್ದಿಗೆ ಕಾರಣಕರ್ತ ಳಾಗುತ್ತಾಳೆ. ಅವರಿಗೆ ಸಿಗಬೇಕಾದ ಸ್ಥಾನಮಾನ, ಗೌರವ ಕೊಡುವುದು ಎಲ್ಲರ ಕರ್ತವ್ಯವಾಗಿದೆ. ಪ್ರತಿ ಮಹಿಳೆಯು ಸಾಮಾಜಿಕ ವ್ಯವಹಾರಗಳ ಮೂಲಕ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳುವಲ್ಲಿ ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರು ಎಂದು ಶ್ಲಾಘಿಸಿದರು.

2

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರೆ| ಫಾ| ಮೈಕೆಲ್, ಸಾಂತುಮಯೋರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಿಲಾಗ್ರಿಸ್ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು. ಶ್ರಾವ್ಯ ಸ್ವಾಗತಿಸಿದರು. ವಿದ್ಯಾರ್ಥಿ ನಿ ದೀಪ ವಂದಿಸಿದರು, ವಿದ್ಯಾರ್ಥಿನಿ ಮೌನ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

2 (1)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು