ಮಂಗಳೂರು

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಇಸ್ರೋ ವಿಜ್ಞಾನಿ ಭೇಟಿ

ಮೂಡುಬಿದಿರೆ: ವೈದ್ಯಕೀಯ ತಂತ್ರಜ್ಞಾನ ಕ್ಷೇತ್ರಗಳಿಗೆ ಅನಿವಾರ್ಯ ಹಾಗೂ ಅಗತ್ಯವಾಗಿರುವ ವಿಜ್ಞಾನದ ಬಗ್ಗೆ ವಿಶೇಷ ಸಂಶೋಧನೆ ಮಾಡುವ ಆಸಕ್ತಿ ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿ ಹುಟ್ಟಬೇಕಾದರೆ ಪ್ರಕೃತಿಯ ಪ್ರತಿಯೊಂದು ಶಕ್ತಿಗಳನ್ನು ಆಸಕ್ತಿಯಿಂದ ಶ್ರದ್ಧೆಯಿಂದ ಪ್ರಶ್ನಿಸುವ ಗುಣಗಳನ್ನು ಬೆಳೆಸಿಕೊಂಡು ಆ ಕುರಿತಾಗಿ ಸಂಶೋಧನೆ ದೃಷ್ಟಿಯಿಂದ ಮುಂದುವರಿಯಬೇಕೆAದು ಇಸ್ರೋ ವಿಜ್ಞಾನಿ ಚೈತನ್ಯ ಡಿ. ಜೈನ್ ಹೇಳಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಸಂಸ್ಥೆಯಲ್ಲಿ ನಡೆದ ಸ್ಪಿರಿಟ್ ಆಫ್ ಇನ್ನೋವೇಶನ್ ಕಾರ್ಯಕ್ರಮದಲ್ಲಿ ಮಾತಾಡಿದರು.

ಎಕ್ಸಲೆಂಟ್ ಸಮೂಹ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆವಹಿಸಿದರು. ವಿದ್ಯಾರ್ಥಿಗಳ ದೃಷ್ಟಿ ವೈಜ್ಞಾನಿಕವಾಗಿ ಬಲಗೊಂಡು ಅವರ ಸೃಜನಶೀಲತೆಗೆ ಇಂತಹ ಕಾರ್ಯಕ್ರಮಗಳು ಬಲ ತುಂಬಿ ವ್ಯಕ್ತಿತ್ವದಲ್ಲಿ ಬಲಿಷ್ಠರಾಗುವಲ್ಲಿ ಸಹಕಾರಿಯಾಗಲಿ ಎಂದರು.

ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್, ಉಪ ಪ್ರಾಂಶುಪಾಲ ಮನೋಜ್ ಕುಮಾರ್, ಉಜಿರೆಯ ಡಾ.ಸಂಪತ್ ಕುಮಾರ್ ಉಪಸ್ಥಿತರಿದ್ದರು.

ಆ ಬಳಿಕ ವಿದ್ಯಾರ್ಥಿಗಳ ಜೊತೆ ವಿಜ್ಞಾನ ಮತ್ತು ಸಂಶೋಧನೆ ಕುರಿತು ಸಂವಾದ ನಡೆಯಿತು. ಉಪನ್ಯಾಸಕ ವಿಕ್ರಂ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

26 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago