News Karnataka Kannada
Monday, May 06 2024
ಮಂಗಳೂರು

ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜೆ. ಆರ್‌ ಲೋಬೊ ನಾಮಪತ್ರ

ಲೊಬೊ ನ್ಯೂ
Photo Credit : News Kannada R Bhat

ಮಂಗಳೂರು: ಮಂಗಳೂರು ವಿಧಾನಸಭಾ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗುರುವಾರ ಜೆ.ಆರ್.‌ ಲೋಬೊ ನಾಮಪತ್ರ ಸಲ್ಲಿಕೆ ಮಾಡಿದರು. ಜನರ ಒಲವು ಈ ಬಾರಿ ಕಾಂಗ್ರೆಸ್ ಪರ ಇದೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಮಂಗಳಾದೇವಿ ಕ್ಷೇತ್ರ, ಕದ್ರಿ ಕ್ಷೇತ್ರ, ಬಿಕರ್ನಕಟ್ಟೆಯ ಚರ್ಚ್‌, ಮಂಗಳೂರಿನ ಬಿಷಪ್ ಹೌಸ್, ರಥಬೀದಿಯ ವೆಂಕಟರಮಣ ದೇವಸ್ಥಾನ, ಬಂದರಿನ ಝೀನತ್ ಭಕ್ಷ್ ಜುಮ್ಮಾ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಜತೆ ವಿಶೇಷ ಪೂಜೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು