Categories: ಮಂಗಳೂರು

ಮೂಡುಬಿದಿರೆಯಲ್ಲಿ ಜನಸ್ಪಂದನ: 360 ಮಂದಿಗೆ ಹಕ್ಕುಪತ್ರ, 69 ಜನರಿಗೆ ಪಿಂಚಣಿ ಆದೇಶಪತ್ರ ವಿತರಣೆ

ಮೂಡುಬಿದಿರೆ: ಕಳೆದ ಹಲವಾರು ವರ್ಷಗಳ ಹಿಂದೆ ಮನೆ ನಿರ್ಮಿಸಿ ಕುಳಿತುಕೊಂಡು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಹೊಸಬೆಟ್ಟು ಮತ್ತು ತೋಡಾರು ಗ್ರಾಮಗಳ 8 ಕೊರಗ ಕುಟುಂಬಗಳಿಗೆ ಸಹಿತ 360 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು 69 ಜನರಿಗೆ ಪಿಂಚಣಿ ಆದೇಶಪತ್ರವನ್ನು ಕ್ಷೇತ್ರದ ಶಾಸಕ ಕೋಟ್ಯಾನ್ ಬುಧವಾರ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ವಿತರಿಸಿದರು.

ಪುತ್ತಿಗೆ ಜಿ.ಪಂ.ಕ್ಷೇತ್ರದ 6 ಗ್ರಾಪಂ ವ್ಯಾಪ್ತಿಯ 8 ಗ್ರಾಮಗಳಿಗೆ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೋಟ್ಯಾನ್. ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ಬಳಿಗೆ ಬಂದು ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವಂತಹ ಕಾರ್ಯಕ್ರಮ ಜನಸ್ಪಂದನ. ಕೆಲವು ಪಂಚಾಯಿತಿಗಳಲ್ಲಿ ಈಗ ನೀವು ಹಕ್ಕುಪತ್ರ ತೆಗೆದುಕೊಳ್ಳಬೇಡಿ 3 ತಿಂಗಳ ನಂತರ ನಾವೇ ಮಾಡಿಕೊಡುತ್ತೇವೆಂದು ಅಮಾಯಕರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಗಮನಕ್ಕೆ ಬಂದಿದೆ. ರಾಜಕೀಯ ಬೇಳೆ ಬೇಯಿಸಲು ಜನರಿಗೆ ಮೋಸ ಮಾಡಬೇಡಿ ಎಂದು ಎಚ್ಚರಿಸಿದರು.

ಪುತ್ತಿಗೆ ಗ್ರಾಪಂ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಇರುವೈಲು ಗ್ರಾಪಂ ಅಧ್ಯಕ್ಷ ವಲೇರಿಯನ್ ಕುಟಿನ್ಹಾ, ಪಾಲಡ್ಕ ಗ್ರಾಪಂ ಅಧ್ಯಕ್ಷ ದಿನೇಶ್ ಕಾಂಗ್ಲಾಯಿ, ಹೊಸಬೆಟ್ಟು ಗ್ರಾಪಂ ಅಧ್ಯಕ್ಷೆ ಮೀನಾಕ್ಷಿ, ತೆಂಕಮಿಜಾರು ಗ್ರಾಪಂ ಅಧ್ಯಕ್ಷೆ ರುಕ್ಮಿಣಿ, ಕಲ್ಲಮುಂಡ್ಕೂರು ಗ್ರಾಪಂ ಅಧ್ಯಕ್ಷ ಕೇಶವ ಪೂಜಾರಿ, ಮೂಡಾದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ತಹಸೀಲ್ದಾರ್ ಸಚ್ಚಿದಾನಂದ ಸತ್ಯಪ್ಪ ಕುಚನೂರು, ತಾಪಂ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕಂದಾಯ ನಿರೀಕ್ಷಕ ಮಂಜುನಾಥ್, ಉಪತಹಸೀಲ್ದಾರ್ ರಾಮ್ ಉಪಸ್ಥಿತರಿದ್ದರು.

Sneha Gowda

Recent Posts

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

48 seconds ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

19 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

20 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

24 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

35 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

40 mins ago