ಮಂಗಳೂರು

ಜೆಡಿಎಸ್‌ಗೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ: ಇನಾಯತ್‌ ಅಲಿ ವ್ಯಂಗ್ಯ

ಮಂಗಳೂರು: ಜೆಡಿಎಸ್‌ ಪಕ್ಷಕ್ಕೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಹೇಳಿದರು. ನ್ಯೂಸ್‌ ಕನ್ನಡ, ನ್ಯೂಸ್‌ ಕರ್ನಾಟಕ ಪ್ರತಿನಿಧಿಯೊಂದಿಗೆ ಅವರು ಮಾತನಾಡುವ ವೇಳೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್‌ನಲ್ಲಿದ್ದ ಮೊಹಿಯುದ್ದೀನ್‌ ಬಾವಾ ಪಕ್ಷ ತೊರೆದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿಯಾಗಿ ಮತಗಳು ಹಂಚಿಹೋಗುತ್ತವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮಗೆ ಜೆಡಿಎಸ್‌ ಎದುರಾಳಿ ಅಲ್ಲವೇ ಅಲ್ಲ. ಇಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮಾತ್ರ ನೇರ ಹಣಾಹಣಿ ಇದೆ ಎಂದು ಅಲಿ ಹೇಳಿದರು. ಟೆಕೆಟ್‌ ಸಿಗದ ನಿರಾಶೆಯಿಂದ ಬಾವಾ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಕಾರ್ಯಕರ್ತರು, ಮುಖ್ಯವಾಗಿ ಜನತೆ ನನ್ನೊಂದಿಗಿದ್ದಾರೆ. ಅಲ್ಲದೆ ಜನರ ಸ್ಪಂದನೆ ಉತ್ತಮವಾಗಿದೆ ಎಂದು ಅವರು ಹೇಳಿದರು.

ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಎತ್ತರಕ್ಕೆ ಏರಿಸುವುದು ನಮ್ಮ ಧ್ಯೇಯ. ಅದೇ ರೀತಿ ಯುವಜನರು ಉದ್ಯೋಗವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿ ಉದ್ಯೋಗ ನೀಡಲು ಪ್ರವಾಸೋದ್ಯಮ, ಐಟಿ, ಟೆಕ್ಸ್‌ಟೈಲ್‌ ಉದ್ಯಮಕ್ಕೆ ಒತ್ತು ನೀಡಲಾಗುವುದು. ಕುಡಿಯುವ ನೀರಿನ ಯೋಜನೆಗೆ ಒತ್ತುನೀಡಲಾಗುವುದು. ಅದೇ ರೀತಿ ಗುರುಪುರ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆ ಅಗತ್ಯವಿದೆ. ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು. ಎಂಆರ್‌ಪಿಎಲ್‌, ಒಎನ್‌ಜಿಸಿಯಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸಿಕೊಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago