Categories: ಮಂಗಳೂರು

‘ಬೇಬಿ ಫಾರ್‌ ಸೇಲ್‌’: ಕಬಡ್ಡಿ ಆಟಗಾರ ಆತ್ಮಹತ್ಯೆ ಪ್ರಕರಣಕ್ಕೆ ಸ್ಟೋಟಕ ಟ್ವಿಸ್ಟ್

ಮಂಗಳೂರು: ಜಿಲ್ಲಾ ಮಟ್ಟದ ಕಬ್ಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಲೋನ್‌  ಆಪ್ ಕಿರುಕುಳ ತಡೆಯಲಾರದೆ ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಪುದುವೆಟ್ಟು ನಿವಾಸಿ ಸ್ವರಾಜ್‌ (24) ಲೋನ್‌ ಆಪ್‌ ಮೂಲಕ ಸಾಲ ಪಡೆದಿದ್ದರು. ಆ.30 ಆಪ್‌ ಲೋನ್‌ ಸಾಲಕ್ಕೆ ಸಂಬಂಧಿಸಿ 30 ಸಾವಿರ ಹಣ ಕಟ್ಟಿದ್ದರು. ಬಳಿಕ ಆ.31ರಂದು ಆಪ್‌ ನ ಕ್ರಿಮಿನಲ್‌ಗಳು ಮತ್ತೊಮ್ಮೆ ಹಣ ನೀಡುವಂತೆ ಡೆಡ್‌ಲೈನ್‌ ನೀಡಿದ್ದರು. ಇದರಿಂದ ಸ್ವರಾಜ್‌ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಈ ವೇಳೆ ವಾಟ್ಸಪ್‌ ಡಿಪಿಯಲ್ಲಿ ಸ್ವರಾಜ್‌ ತನ್ನ ಅಕ್ಕನ ಮಗಳ ಫೋಟೋ ವನ್ನು ಹಾಕಿರುವುದನ್ನೇ ದುರ್ಬಳಕೆ ಮಾಡಿಕೊಂಡ ಆಪ್‌ ಕ್ರಿಮಿನಲ್‌ಗಳು ಹಣ ನೀಡುವಂತೆ ಒತ್ತಡ ಹೇರಲು ಆಫೋಟೋವನ್ನೇ ಬಳಸಿಕೊಂಡಿದ್ದಾರೆ.

ಫೋಟೋವನ್ನು ‘Baby for sale’ ಎಂದು ಎಡಿಟ್ ಮಾಡಿ ಸ್ವರಾಜ್‌ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನುತಡೆಯಲಾರದೆ ಸ್ವರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ashika S

Recent Posts

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

24 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

33 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

52 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

2 hours ago