News Karnataka Kannada
Friday, May 03 2024
ಮಂಗಳೂರು

ಕಡಬ: ಅಡುಗೆ ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ಪರಿಶೀಲನೆ

Cooking gas leak suspected, fire brigade to probe
Photo Credit : News Kannada

ಕಡಬ: ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಘಟನೆ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌.

ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು