ಕಡಬ: ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.
ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇ
ಮೈಸೂರು ದುಬಾರೆಯಿಂದ ಅಭಿಮನ್ಯು ಸೇರಿ 5ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದ್ದು, ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು.
ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…