News Karnataka Kannada
Saturday, May 04 2024
ಮಂಗಳೂರು

ಕಡಬ: ಪರೀಕ್ಷೆಗೆ ಹೆದರಿ‌ ಆತ್ಮಹತ್ಯೆಗೆ ಶರಣಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ, ನದಿಯಲ್ಲಿ ಶವ ಪತ್ತೆ!!

Five die in Thane hospital in a single day
Photo Credit : Pixabay

ಕಡಬ: ಟ್ಯೂಷನ್ ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕಡಬ ತಾಲೂಕಿನ ಪುಳಿಕುಕ್ಕು ಸಮೀಪದ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರ(ಮಾ.30) ಪತ್ತೆಯಾಗಿದೆ.

ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಎಂಬಾತ ಬುಧವಾರ ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ. ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ.

ಮಾ. 31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷಾ ಭಯದಿಂದ ಹೆದರಿ ನದಿಗೆ ಹಾರಿ ಆತ್ಮಹತ್ಯೆಗೆ ಅದ್ವೈತ್ ಶರಣಾದನೇ? ಎಂಬ ಅನುಮಾನ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು