News Karnataka Kannada
Friday, April 19 2024
Cricket
ಮಂಗಳೂರು

ವರದಿಗಾರನ ಮೇಲಿನ ಹಲ್ಲೆ ಖಂಡಿಸಿದ ಕಡಬ ತಾಲೂಕು ಪತ್ರಕರ್ತರ ಸಂಘ

Kadaba Taluk Journalists' Association condemns attack on reporter
Photo Credit : News Kannada

ಕಡಬ: ವಿಜಯವಾಣಿ ಮತ್ತು ದಿಗ್ವಿಜಯವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ನಿನ್ನೆ (ಶನಿವಾರ) ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ಖಂಡಿಸಿದೆ.

ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ  ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಕಡಬ ತಾಲೂಕು ಪತ್ರಕರ್ತರ ಸಂಘ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು‌ ಜರುಗಿಸಬೇಕು ಎಂದು‌ ಒತ್ತಾಯಿಸುತ್ತದೆ.

ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ‌ ಜರಗಿಸದೇ ಇದ್ದಲ್ಲಿ‌ ಎಲ್ಲಾ ಪತ್ರಕರ್ತರ ಜತೆ ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದು‌ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಹಾಗೂ ಕಾರ್ಯದರ್ಶಿ ವಿಜಯಕುಮಾರ್ ಪೆರ್ಲ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು