ಕಡಬ: ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಕಡಬದಲ್ಲಿ ನಡೆದಿದೆ.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕರಾದ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗಳಾಗಿವೆ
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಅರಣ್ಯ ಸಿಬಂದಿ ಪರಿಶೀಲನೆ ಮಾಡಿದ್ದಾರೆ.