News Karnataka Kannada
Monday, May 06 2024
ಮಂಗಳೂರು

ಹ್ಯಾಕರ್‌ಗಳಿಂದ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ: ಇಂದು ಸ್ವದೇಶಕ್ಕೆ

Kabdlk
Photo Credit : News Kannada

ಮಂಗಳೂರು: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ (ನ.20) ಸ್ವದೇಶಕ್ಕೆ ಆಗಮಿಸಲಿದ್ದಾರೆ.

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ 2022ರಲ್ಲಿ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ ಕಂಪನಿ ಕೆಲಸಕ್ಕೆ ತೆರಳಿದ್ದರು. ಅಲ್ಲಿಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪನಿಯಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು.

ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆ ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಚಂದ್ರಶೇಖರ್‌ ಅವರನ್ನು ಬಂಧಿಸಲಾಗಿತ್ತು. ಚಂದ್ರೇಖರ್ ಕೆಲಸ ಮಾಡುವ ಕಂಪನಿ ಅವರಿಗೆ ಭದ್ರತೆ ಮತ್ತು ಕಾನೂನು ನೆರವು ನೀಡಬೇಕಿತ್ತು. ಆದರೆ ಮನೆಯವರಿಗೂ ಮಾಹಿತಿ ನೀಡಿಲ್ಲ. ಹೀಗಾಗಿ ಸಂಸ್ಥೆಯ ವಿರುದ್ಧ ಕೂಡ ಕಾನೂನು ಸಮರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಆತನ ಸ್ನೇಹಿತರು ಈಗಾಗಲೇ 10 ಲಕ್ಷ ರೂ. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದಾರೆ. ಆದರೂ ಆತನ ಬಿಡುಗಡೆ ಸಾಧ್ಯವಾಗಿಲ್ಲ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಶ್ರೀಧರ ಗೌಡ ಮಾಹಿತಿ ನೀಡಿದರು. ಆ.18ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು ಪತ್ರ ಚಳವಳಿ ಮೂಲಕ ಪ್ರಧಾನಿ, ವಿದೇಶಾಂಗ ಸಚಿವರ ಗಮನ ಸೆಳೆಯುವಂತೆ ಮನವಿ ಮಾಡಿದರು. ಕೊನೆಗೂ ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್‌ ಅವರ ಬಿಡುಗಡೆಗೆ ಕೈಜೋಡಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು