ಮಂಗಳೂರು

ಕಾಪು ಲೈಟ್‍ಹೌಸ್ ಬಳಿ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

ಕಾಪು: ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ.

ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಪ್ರಯತ್ನಿಸುತ್ತಿರುವುದರಿಂದ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ.

ಈಗಾಗಲೇ ಸಮುದ್ರ ಎರಡು ಅಡಿಯಷ್ಟು ಆಳದವರೆಗಿನ ಮರಳನ್ನು ತನ್ನ ಒಡಲಿಗೆ ಎಳೆದುಕೊಂಡಿದ್ದು ಲೈಟ್ ಹೌಸ್ ಮತ್ತು ಸಮುದ್ರದ ನಡುವೆ ಒಂದೂವರೆ ಅಡಿಯಷ್ಟು ಆಳಕ್ಕೆ ಇಳಿದಿದೆ. ಇದರಿಂದಾಗಿ ಲೈಟ್‌ಹೌಸ್ ಹೋಗುವ ದಾರಿ ಬಂದ್ ಆಗಿದೆ. ಕಳೆದ ೩-೪ ದಿನಗಳಿಂದ ಲೈಟ್ ಹೌಸ್‌ಗೂ ಬೀಗ ಜಡಿಯಲಾಗಿದ್ದು, ಪ್ರವಾಸಿಗರಿಗೆ ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

32 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

57 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago