ಮಂಗಳೂರು

ಕಾಪು: ಗುರ್ಮೆ ಸುರೇಶ್ ಶೆಟ್ಟಿಯವರಿಂದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ

ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು 1 ನೇ ಪೆರ್ಡೂರ್ ಗ್ರಾಮ ಪಂಚಾಯತ್ ಪೆರ್ಡೂರು ಇಲ್ಲಿ ಭರ್ಜರಿ ಮತಯಾಚನೆ ನೇರವೇರಿತು.

ಈ ಸಂಧರ್ಭದಲ್ಲಿ ನೆರೆದಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ರವರು ದೇಶದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಉತ್ತಮ ಕೊಡುಗೆಯನ್ನು ನೀಡಿದೆ. ಇನ್ನಷ್ಟು ಅಭಿವೃದ್ಧಿಗಳು ಬಿಜೆಪಿ ಸರ್ಕಾರದಿಂದ ನಡೆಯಲಿದೆ. ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ಮತ ನೀಡಿ ಅವರಿಗೆ ಬೆಂಬಲ ನೀಡಬೇಕಾಗಿ ತಿಳಿಸಿದರು.

ನಂತರ ಮಾತನಾಡಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ಬಿಜೆಪಿ ಸರ್ಕಾರ ಕಾಪು ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿಕಾರ್ಯಗಳನ್ನು ಮಾಡಿದೆ. ಶೈಕ್ಷಣಿಕ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಸಮಾಜ ಸೇವಕ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವು ನೀವೆಲ್ಲರೂ ಸೇರಿ ನಿಭಾಯಿಸೋಣ ಎಂದು ತಿಳಿಸಿದರು.

ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಕೇಂದ್ರ ಮತ್ತು ರಾಜ್ಯ ಬಿಜೆಪಿ ಡಬಲ್ ಇಂಜಿನ್ ಸರ್ಕಾರವು ಕಾಪು ವಿಧಾನಸಭಾ ಕ್ಷೇತ್ರ ದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಸಾವಿರಾರು ಕೋಟಿ ಅನುದಾನಗಳನ್ನ ನೀಡಿ ಅಭಿವೃದ್ಧಿ ಯೋಜನೆಗಳನ್ನು ಕಾರ್ಯ ರೂಪಕೆ ತಂದಿದೆ.ಬಿಜೆಪಿ ಪಕ್ಷದ ಸಿದ್ದಾoತ, ರಾಷ್ಟ್ರಿಯ ವಾದ, ರಾಷ್ಟ್ರ ಪರ ಚಿಂತನೆಗಳು ಹಾಗೂ ಹಿರಿಯರು ಇಟ್ಟ ವಿಶ್ವಾಸಗಳನ್ನು ಯಾವುದೇ ದಕ್ಕೆ ಬಾರದ ರೀತಿಯಲ್ಲಿ ನೋಡಿಕೊಂಡು ಕಾಪುವಿನ ಹೆಸರನ್ನು ಉಳಿಸುವ ಬೆಳೆಸುವ ಕೆಲಸವನ್ನು ಮಾಡುತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ವೀಣಾ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಗೀತಾoಜಲಿ ಸುವರ್ಣ, ಉಡುಪಿ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸುರೇಶ್ ನಾಯಕ್, ನವದೆಹಲಿ ಮಾಜಿ ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ ದ ಶ್ಯಾಮಲಾ ಕುಂದರ್, ಕಾಪು ವಿಧಾನ ಸಭಾ ಕ್ಷೇತ್ರ ದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಶಿಲ್ಪಾ ಜಿ ಸುವರ್ಣ, 1ನೇ ಪೆರ್ಡೂರ್ ಗ್ರಾಮ ಪಂಚಾಯತ್ ಅಧ್ಯಕ್ಷರು  ದೇವು ಪೂಜಾರಿ,ಕಾಪು ಕ್ಷೇತ್ರ ಮಹಿಳಾ ಮಂಡಳಿ ಅಧ್ಯಕ್ಷರು ಸುಮಾ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಎಸ್ ಜಿಯಾನಂದ್ ಹೆಗ್ಡೆ,ಹಾಗೂ ಪಕ್ಷದ ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago