Categories: ಮಂಗಳೂರು

ಕಾರ್ಕಳದಲ್ಲಿ ನೈತಿಕ ಪೊಲೀಸ್ ಗಿರಿ: ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಕಾರ್ಕಳ: ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ರವಿವಾರ ಸಂಜೆ ನಡೆದಿದೆ.

ಮಂಗಳೂರಿನ‌ ಹೆಸರಾಂತ ಕಾಲೇಜು ವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು.
ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಬಂದ ಮತ್ತೊಂದು ಕಾರು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದನೆಗೈದು ಬೆದರಿಕೆಯೊಡ್ಡಿದ್ದರು.

ಪ್ರಯಾಣಿಕರ ಕಾರಿನಲ್ಲಿ ಇದ್ದ ಸುಮಾರು 36,38 ವರ್ಷ ಪ್ರಾಯದ ಮಹಿಳೆಯರು ನೇರವಾಗಿ 112ಗೆ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ , ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ತೆರಳಿ ನೈತಿಕ ಪೊಲೀಸ್ ಗಿರಿ ತೋರ್ಪಡಿಸಿದ ಐವರು ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಂತೋಷ್ ನಂದಳಿಕೆ,ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ‌. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago