ಮಂಗಳೂರು

ಕರಾವಳಿಯಲ್ಲಿ ವ್ಯಾಪಾರ ದಂಗಲ್‌: ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್‌

ಮಂಗಳೂರು: ಹಿಂದೂ ದೇವಸ್ಥಾನಗಳ್ಳಲ್ಲಿ ಹಿಂದೂಗಳೇ ವ್ಯಾಪಾರ ಮಾಡಬೇಕು ಎಂಬ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಅಸ್ತಿತ್ವಕ್ಕೆ ಬಂದಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಘಟನೆ ಅಧಿಕೃತವಾಗಿ ಲೋಕಾರ್ಪಣೆಗೊಂಡಿದ್ದು, ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳು ಮಾತ್ರವೇ ವ್ಯಾಪಾರ ಮಾಡಬೇಕು. ಈ ನಿಟ್ಟಿನಲ್ಲಿ ನಿಮ್ಮ ಜೊತೆ ನಾನಿದ್ದೇನೆ” ಎಂದು ವ್ಯಾಪಾರಿಗಳಿಗೆ ಭರವಸೆ ನೀಡಿದ್ದಾರೆ.

ಕಳೆದ ವರ್ಷ ಕರಾವಳಿ ಭಾಗದಲ್ಲಿ ಹಿಂದೂ ಜಾತ್ರಾ ಮಹೋತ್ಸವಗಳಲ್ಲಿ ಹಿಂದೂಗಳು ಮಾತ್ರ ವ್ಯಾಪಾರ ಮಾಡಬೇಕು. ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂಬ ವಿವಾದ ಏರ್ಪಟ್ಟಿತ್ತು. ಕರಾವಳಿ ಭಾಗದ ಹಲವು ಜಾತ್ರೆಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂಬ ಬ್ಯಾನರ್‌ ಕೂಡ ಅಳವಡಿಸಲಾಗಿತ್ತು.

ನಂತರ ಹಿಂದೂ ವ್ಯಾಪಾರಸ್ಥರು ಒಟ್ಟೂಗೂಡಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘಟನೆ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ರಾಜ್ಯದೆಲ್ಲೆಡೆ ಕಾಡ್ಗಿಚ್ಚಿನಂತೆ ಅಭಿಯಾನ ಹರಡಿತ್ತು. ಇದೀಗ ಬಿಜೆಪಿ ಅಧ್ಯಕ್ಷರು ಸಂಘಟನೆಯನ್ನು ಅಧಿಕೃತವಾಗಿ ಉದ್ಘಾಟಿಸುವ ಮೂಲಕ ವಿವಾದ ಮತ್ತೊಮ್ಮೆ ಭುಗಿಲೇಳುವಂತಾಗಿದೆ.

ಹಿಂದೂ ವ್ಯಾಪಾರಸ್ಥರಿಗೆ ಠಕ್ಕರ್‌: ಈ ಹಿಂದೆ ಕರಾವಳಿಯ ಹಲವು ಜಾತ್ರಾ ಮಹೋತ್ಸವಗಳಲ್ಲಿ ಹಿಂದೂ ವ್ಯಾಪರಸ್ಥರಿಗೆ ಮಾತ್ರ ಅವಕಾಶ ಎಂಬ ಬ್ಯಾನರ್ ಅಳವಡಿಸಿದ ವೇಳೆ ಹಿಂದೂ ವ್ಯಾಪಾರಸ್ಥರ ಸಂಘಕ್ಕೆ ಠಕ್ಕರ್‌ ಕೊಡುವ ಸಲುವಾಗಿ ‘ಜಾತ್ರಾ’ (ದೇವಸ್ಥಾನಗಳ ಜಾತ್ರೆ) ವರ್ತಕರ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಈ ಸಂಘಟನೆಯಲ್ಲಿ ಹಿಂದೂ ,ಮುಸ್ಲಿಂ ,ಕ್ರೈಸ್ತ ವ್ಯಾಪಾರಸ್ಥರು ಒಳಗೊಂಡಿದ್ದರು. ಈ ಸಂಘಟನೆ ಜಾತ್ರಾ ಮಹೋತ್ಸವದಲ್ಲಿ ಎಲ್ಲ ವರ್ಗದವರಿಗೂ ಅವಕಾಶ ನೀಡಲು ಆಗ್ರಹಿಸಿತ್ತು

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago