ಮಂಗಳೂರು

“ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಉದ್ಘಾಟಿಸಿದ ಕಟೀಲ್

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.

ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಮಾತನಾಡಿ, ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ಆರು ಜನ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಇಂದಿನ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 15 ಹುಲಿವೇಷ ತಂಡಗಳಿಗೂ ಶುಭ ಹಾರೈಕೆಗಳು ಮತ್ತು ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತ ಎಂದರು.

ಉದ್ಘಾಟನೆಯ ನಂತರ ಪಿಲಿಪರ್ಬ-2023 ಸ್ಪರ್ಧಾಕೂಟದ ಮೊದಲ ತಂಡವಾಗಿ ಶಿವಶಕ್ತಿ ಟೈಗರ್ಸ್ ಕುಂಜತ್ತೂರು, ಮಂಜೇಶ್ವರ ಪ್ರದರ್ಶನ ನೀಡಿತು.

ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನಿತಾ ಪೂಜಾರಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಉದಯ ಪೂಜಾರಿ, ಮಾಜಿ ಶಾಸಕ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ, ಕಮಲಾಕ್ಷ ಬಜಿಲಕೇರಿ, ನರೇಶ್ ಶೆಣೈ, ಮತ್ತು ಬಿಜೆಪಿಯ ಮಹಾನಗರ ಪಾಲಿಕೆ ಸದಸ್ಯರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ashika S

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

4 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

11 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

18 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

30 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

34 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

49 mins ago