News Karnataka Kannada
Saturday, May 04 2024
ಮಂಗಳೂರು

ಕಾಂಗ್ರೆಸ್ ಪಕ್ಷದ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

ಅನೇಖ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ
Photo Credit : NewsKarnataka

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನೀಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಇದೀಗ ಬಿಜೆಪಿ ಫ್ಲ್ಯಾಗ್ ಹಿಡಿದು ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು