Categories: ಮಂಗಳೂರು

ಹೈಕಮಾಂಡ್‌ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೋಡಿಜಾಲ್‌

ಮಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಧನ್ಯವಾದ ಎಂದು ಮಂಗಳೂರು ಕಾಂಗ್ರೆಸ್ ಹಿರಿಯ ಮುಖಂಡ ಕೋಡಿಜಾಲ್ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಈಗಾಗಲೇ ಐದು ಭರವಸೆ ಘೋಷಿಸಿದೆ. ಈ ಭರವಸೆ ಪೂರೈಕೆ ಮಾಡುವ ಮಹತ್ತರ ಜವಾಬ್ದಾರಿ ಸಿಎಂ, ಡಿಸಿಎಂ ಮೇಲಿದೆ. ಕಾಂಗ್ರೆಸ್ ಈ ವರೆಗೆ ನೀಡಿದ ಯೋಜನೆ ಭರವಸೆಯಲ್ಲಿ ಯಾವುದರಿಂದಲೂ ಹಿಂದೆ ಸರಿದಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಎಲ್ಲಾ ಯೋಜನೆಗಳನ್ನು ಜನರಿಗೆ ನೀಡಿದೆ. ಮುಂದೆಯೂ ಇದೇ ರೀತಿ ಆಗುವ ಭರವಸೆ ನೀಡಲಿದ್ದೇವೆ. ಸಿದ್ದರಾಮಯ್ಯ ಅವರು ದೇವರಾಜ್ ಅರಸು ಅವರಂತೆ ಆಡಳಿತ ನಡೆಸಿದ ಸಿಎಂ. ಜಿಲ್ಲೆಯ ನಾಯಕರಲ್ಲಿ ಆತಂರಿಕವಾಗಿ ಯಾವುದೇ ಕೊರತೆ ಇಲ್ಲ. ಹಾಗೆ ನೋಡಿದರೆ ಬಿಜೆಪಿಯಲ್ಲಿ ಆಂತರಿಕ ಜಗಳ ಹೆಚ್ಚಿದೆ. ಹೈಕಮಾಂಡ್ ಕೈಗೊಂಡ ನಿರ್ಧಾರ ಹೆಚ್ಚು ಸೂಕ್ತವಾಗಿದೆ ಎಂದರು.

ಸಿದ್ದರಾಮಯ್ಯ ಅವರ ಇದು ಕೊನೆಯ ಚುನಾವಣೆ ಆ ನಿಟ್ಟಿನಲ್ಲಿ ಹೈಕಮಾಂಡ್ ನಿರ್ಧಾರ ಸ್ಪಷ್ಟವಾಗಿದೆ. ಲೋಕಸಭೆ ಚುನಾವಣೆಗೆ ಶೀಘ್ರವಾಗಿ ಅಭ್ಯರ್ಥಿಗಳನ್ನು ಘೋಷಿಸಲಿದ್ದೇವೆ. ೨೮ ಲೋಕ ಸಭಾ ಕ್ಷೇತ್ರದಲ್ಲಿ ೨೮ ಕ್ಕೂ ಅಧಿಕ ಸ್ಥಾನ ಪಡೆಯಲಿದೆ. ಜಿಲ್ಲೆಯಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ವಿಚಾರ. ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಶಾಸಕರನ್ನು ಪಡೆದಿದೆ. ಆದರೆ ಇಲ್ಲಿ‌ ಅಪಪ್ರಚಾರ ಹೆಚ್ಚಾಗಿದ್ದು ಇದು ಸೋಲಿಗೆ ಕಾರಣವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Umesha HS

Recent Posts

ಅತ್ಯಾಚಾರ ಪ್ರಕರಣ: ರೇವಣ್ಣನ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಎಸ್‌ಐಟಿ ಅಧಿಕಾರಿಗಳು

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು…

1 min ago

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

12 mins ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್…

13 mins ago

ಸಿಟ್ಟಿನಲ್ಲಿ ಕಪಾಳ ಮೋಕ್ಷ: ವ್ಯಕ್ತಿ ಮೃತ್ಯು

ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.

19 mins ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…

19 mins ago

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ…

27 mins ago