Categories: ಮಂಗಳೂರು

ಸ್ಮಾರ್ಟ್‌ ಸಿಟಿ ಅನುದಾನ ದುರ್ಬಳಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಹೇಳಿಕೆ

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊರೆತ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ಕೆಎಎಸ್ ಅಧಿಕಾರಿ ಆಗಿದ್ದವರು. ತಮ್ಮದೇ ಸಂಪರ್ಕ ಬಳಸಿಕೊಂಡು ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಮತ್ತು ಜಲಸಿರಿ ಯೋಜನೆ ತಂದರು. ಆದರೆ ಸ್ಮಾರ್ಟ್‌ ಸಿಟಿ ಯೋಜನೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಮೂರು ವರ್ಷಗಳ ಆಡಳಿತ ನಡೆಸಿದರೂ ಜನರು ನೆನಪಿನಲ್ಲಿಟ್ಟುಕೊಳ್ಳುವ ಯಾವುದೇ ಸಾಧನೆ ಮಾಡಿಲ್ಲ. ಭ್ರಷ್ಟಾಚಾರ ಎಲ್ಲೆ ಮೀರಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಸರಕಾರ ವಿಫಲವಾಗಿದೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡಿದೆ ಎಂದು ದೂರಿದರು.

ಕೊರೊನಾ ಕಾಲದಲ್ಲೂ ಸರಕಾರ ಸಮರ್ಪವಾಗಿ ಪರಿಸ್ಥಿತಿಯನ್ನು ನಿಭಾಯಿಸಲಿಲ್ಲ. ಕೋವಿಡ್ ಪ್ಯಾಕೇಜ್ ಯಾರಿಗೂ ತಲುಪಲಿಲ್ಲ. ವಿತರಣೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಯುವಕರಿಗೆ ಉದ್ಯೋಗ ಸೃಷ್ಠಿಗೆ ಯಾವುದೇ ಯೋಜನೆ ಜಾರಿಗೊಳಿಸಲಿಲ್ಲ ಎಂದು ಪದ್ಮರಾಜ್ ಅರೋಪಿಸಿದರು. ಸ್ಮಾರ್ಟ್‌ ಸಿಟಿ ಮೂಲಕ ಸ್ಮಾರ್ಟ್‌ ಸಿಟಿ ಅನುದಾನ ದೊರೆತಿದ್ದರೂ ಸಾರ್ವಜನಿಕರಿಗೆ ಮೂತ್ರ ವಿಸರ್ಜನೆಗೆ ಅಗತ್ಯ ಶೌಚಾಲಯ ಕೂಡ ನಿರ್ಮಾಣ ಮಾಡಿಲ್ಲ ಎಂದು ಆರೋಪಿಸಿದರು.

ದೇಶ ಒಡೆಯುವ ತಂತ್ರ ಫಲಿಸುವುದಿಲ್ಲ: ಬಿಜೆಪಿ ಸರಕಾರದ ಬಗ್ಗೆ ಜನರು ಬಹಳಷ್ಟು ನಿರೀಕ್ಷೆ, ನಂಬಿಕೆ ಇಟ್ಟುಕೊಂಡಿದ್ದರು. ಹಾಗೆಯೇ ಸಾಕಷ್ಟು ಅವಕಾಶ ನೀಡಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಭಾವನಾತ್ಮಕವಾಗಿ ವಿಭಜನೆ ಮಾಡುವ ಹುನ್ನಾರ ನಡೆಯುತ್ತಿದೆ. ಜನರನ್ನು ಒಡೆದು ಆಳುವ ಬಿಜೆಪಿಯ ತಂತ್ರ ಈ ಬಾರಿ ಫಲ ನೀಡಲ್ಲ ಎಂದರು.

ಬಿಜೆಪಿ ಜಾತಿ, ಧರ್ಮದ ಹೆಸರಲ್ಲಿ ರಾಜಕಾರಣದ ಮೂಲಕ ದೇಶವನ್ನು ಒಡೆಯುತ್ತಿದೆ. ಧರ್ಮ ಧರ್ಮದ ನಡುವೆ ನಡುವೆ ಸಂಘರ್ಷ ಉಂಟು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಬಿಜೆಪಿಯವರು ಆಸ್ತಿ ತೆರಿಗೆ ಹೆಚ್ಚಿಸಿದ್ದು, ಜನರಿಗೆ ನೀಡಿದ ಶೇ 90 ರಷ್ಟು ಆಶ್ವಾಸನೆಗಳನ್ನು ಈಡೇರಿಸಿಲ್ಲ. ಜಿಲ್ಲೆಯ ಜನತೆ ಶಾಂತಿ, ಸೌಹಾರ್ದಯುತ ಬದುಕನ್ನು ನಿರೀಕ್ಷಿಸುತ್ತಿದ್ದು, ಕಾಂಗ್ರೆಸ್ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಲಿದೆ ಎಂದು ಅವರು ನುಡಿದರು. ಕಾಂಗ್ರೆಸ್ ಮುಖಂಡರಾದ ಸೇಸಮ್ಮ, ಪ್ರಕಾಶ್ ಸಾಲಿಯಾನ್, ಸುನಿಲ್ ಕುಮಾರ್, ಟಿ. ಕೆ. ಸುಧೀರ್ ಉಪಸ್ಥಿತರಿದ್ದರು.

Gayathri SG

Recent Posts

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

3 mins ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

15 mins ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

25 mins ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

31 mins ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

43 mins ago

ಅಕ್ಕನ ಮದುವೆ ಸಂಭ್ರಮ : ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ತಂಗಿಗೆ ಹೃದಯಾಘಾತ

ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್​ನಲ್ಲಿ ನಡೆದಿದೆ. ರಿಂಷಾ (18)…

57 mins ago