News Karnataka Kannada
Monday, May 06 2024
ಮಂಗಳೂರು

ಕೆಎಸ್ಆರ್ಟಿಸಿ ಮಂಗಳೂರು ವಿಭಾಗದಿಂದ ದಸರಾ ನಿಮಿತ್ತ ವಿಶೇಷ ಪ್ರವಾಸ ಪ್ಯಾಕೇಜ್ ಲಭ್ಯ

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
Photo Credit : Twitter

ಮಂಗಳೂರು: ಇದೇ ಮೊದಲ ಬಾರಿಗೆ ಕೆಎಸ್ಆರ್ಟಿಸಿಯ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ಯೋಜಿಸಿದೆ. ಇದು ದಕ್ಷಿಣ ಕನ್ನಡದ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಳ್ಳುತ್ತದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಲಭ್ಯವಿರುತ್ತದೆ. ಬೆಳಿಗ್ಗೆ 8 ರಿಂದ ರಾತ್ರಿ 10.30 ರವರೆಗೆ ಒಂದು ದಿನದ ಪ್ರವಾಸವು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ.

ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಮತ್ತು ಕಡಲತೀರ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಶ್ರೀ ಮರಿಯಮ್ಮ ದೇವಸ್ಥಾನ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯಗಳಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತದೆ.

ವಯಸ್ಕರಿಗೆ 300 ರೂ., ಮಕ್ಕಳಿಗೆ 250 ರೂ. ಆಸನಗಳನ್ನು ಕಾಯ್ದಿರಿಸಲು ಜನರು 9663211553 ಕರೆಯಬಹುದು.

ನ್ಯೂಸ್ ಕನ್ನಡದ ಜೊತೆ ಮಾತನಾಡಿದ ಮಂಗಳೂರಿನ, ಕೆಎಸ್ಆರ್ಟಿಸಿ  ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಕೆಎಸ್ಆರ್ಟಿಸಿ ಟೂರ್ ಪ್ಯಾಕೇಜ್ ಬುಕ್ಕಿಂಗ್ ಇಂದು ಆರಂಭ ಆಗಿದೆ. ಜನರಿಂದ ಒಳ್ಳೆ ನಿರೀಕ್ಷೆ ಇಟ್ಟಿದ್ದೇವೆ ಅದಕ್ಕೆ ತಕ್ಕಂತೆ ಪ್ರತಿಕ್ರಿಯೆಯೂ ಬರುತ್ತಿದೆ ಎಂದರು. ಈ ಕೆಎಸ್ಆರ್ಟಿಸಿ ಪ್ರವಾಸ ಪ್ಯಾಕೇಜ್ ಅನ್ನು ಮಂಗಳೂರು ದಸರಾ ದರ್ಶನಕ್ಕೆ ಇದೇ ಮೊದಲನೇ ಬಾರಿ ಆರಂಭ ಮಾಡಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು